ಚೆನ್ನೈ:ತಮಿಳುನಾಡಿನಲ್ಲಿ ಇಂದಿನಿಂದ 10ನೇ ತರಗತಿ ಹಾಗೂ 12ನೇ ತರಗತಿ ಪುನಾರಂಭಗೊಳ್ಳಲಿದ್ದು, ಪ್ರತಿ ಕ್ಲಾಸ್ ರೂಂನಲ್ಲಿ 25 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಮಾರ್ಚ್-ಏಪ್ರಿಲ್ ತಿಂಗಳಲ್ಲಿ ವಾರ್ಷಿಕ ಪರೀಕ್ಷೆ ಎದುರಿಸಲಿದ್ದು, ಹೀಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವಿದ್ಯಾರ್ಥಿಗೂ ವಿಟಮಿನ್ ಮಾತ್ರೆ ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಆರೋಗ್ಯ, ವೈದ್ಯಕೀಯ ತಜ್ಞರು, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಸಚಿವರ ಅಭಿಪ್ರಾಯ ಆಧರಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಶಿಕ್ಷಣ ಪ್ರಕಟಣೆಯಲ್ಲಿ ತಿಳಿಸಿದೆ.