ಹೈದರಾಬಾದ್: 11 ತಿಂಗಳ ಬಳಿಕ ಆಂಧ್ರಪ್ರದೇಶದಲ್ಲಿ 1 ರಿಂದ 5ನೇ ತರಗತಿವರೆಗಿನ ಶಾಲೆಗಳು ಪುನಾರಂಭಗೊಂಡಿವೆ.
ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಅನುಸರಿಸಿ ಬೆಳಗ್ಗೆ 9 ರಿಂದ 3:45ರವರೆಗೆ ಶಾಲೆಗಳು ಕಾರ್ಯ ನಿರ್ವಹಿಸಲಿವೆ. ಒಂದು ತರಗತಿಯಲ್ಲಿ 20 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಬೇಕು. ಕೊಠಡಿಗಳ ಕೊರತೆಯಿದ್ದರೆ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು.