ನವದೆಹಲಿ:ಜ್ಯೋತಿರಾಧಿತ್ಯ ಸಿಂದಿಯಾ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮರುಕ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಇದ್ದಿದ್ದರೆ ಸಿಎಂ ಆಗ್ತಿದ್ದರು.. ಆದರೆ ಬಿಜೆಪಿಗೆ ಹೋಗಿ ಲಾಸ್ಟ್ ಬೆಂಚರ್ ಆಗಿದ್ದಾರೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಯುವ ಕಾಂಗ್ರೆಸ್ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿರುವ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುವ ಕಾಂಗ್ರೆಸ್ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ನಾನು ಅವನಿಗೆ ಹೇಳಿದ್ದೇ ನೀನು ಮುಂದೆ ಸಿಎಂ ಆಗುತ್ತಿಯಾ ಎಂದು ಆದರೆ, ಆತ ಬೇರೆ ಮಾರ್ಗವನ್ನು ಆಯ್ಕೆ ಮಾಡಿಕೊಂಡ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೂ ಮುಂದುವರಿದ ಮಾತನಾಡಿರುವ ಅವರು, ಬರೆದು ಇಟ್ಟುಕೊಳ್ಳಿ ಅವರು ಮುಂದೆ ಯಾವುದೇ ಕಾರಣಕ್ಕೂ ಸಿಎಂ ಆಗುವುದಿಲ್ಲ. ಒಂದೊಮ್ಮೆ ಅವರು ವಾಪಸ್ ಬಂದರೆ ಆಹಬಹುದು ಎಂದು ಹೇಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದೇ ವೇಳೆ, ಆರ್‌ಎಸ್‌ಎಸ್‌ನ ಸಿದ್ಧಾಂತದ ವಿರುದ್ಧ ಹೋರಾಡಲು ಯಾರಿಗೂ ಹೆದರಬೇಡಿ ಎಂದು ಪಕ್ಷದ ಯುವ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.