ಕರ್ನಾಟಕ

karnataka

ETV Bharat / bharat

ಶಿಯೋಪುರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದ ಎಸ್​​ಡಿಆರ್​ಎಫ್ ಪಡೆ

ಕಳೆದ ನಾಲ್ಕು ದಿನಗಳಿಂದ ಮಧ್ಯಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸೀಪ್​ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಶಿಯೋಪುರದಲ್ಲಿ ಪ್ರವಾಹ ಸಿಲುಕಿದ್ದ ಹಲವರನ್ನು ಎಸ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ.

Sheopur
ಶಿಯೋಪುರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದ ಎಸ್​​ಡಿಆರ್​ಎಫ್ ಪಡೆ

By

Published : Jul 28, 2021, 7:27 AM IST

ಶಿಯೋಪುರ್ (ಮಧ್ಯಪ್ರದೇಶ):ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕೆಲ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸೀಪ್​ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಶಿಯೋಪುರದಲ್ಲಿ ಪ್ರವಾಹ ಸಿಲುಕಿದ್ದ ಹಲವರನ್ನು ಎಸ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ.

ಶಿಯೋಪುರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದ ಎಸ್​​ಡಿಆರ್​ಎಫ್ ಪಡೆ

ಸೀಪ್​ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಹಲವು ಹಳ್ಳಿಗಳಿಗೆ ನೀರು ನುಗ್ಗಿದ್ದು, ಜನರು ಅತಂತ್ರರಾಗಿದ್ದಾರೆ. ಹೀಗಾಗಿ, ಸೀಪ್​ ನದಿ ಪ್ರವಾಹಕ್ಕೆ ಸಿಲುಕಿರುವರನ್ನು ಎಸ್‌ಡಿಆರ್‌ಎಫ್ ತಂಡ ಸ್ಥಳಾಂತರ ಮಾಡುತ್ತಿದೆ.

ಕಳೆದ ನಾಲ್ಕು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಶಿಯೋಪುರ್, ಮೊರೆನಾ, ಭಿಂದ್, ಗುಣ, ಡಾಟಿಯಾ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಜವರಾಯನ ಅಟ್ಟಹಾಸ: ಅಪಘಾತದಲ್ಲಿ 18 ಮಂದಿ ಸಾವು

ABOUT THE AUTHOR

...view details