ಭೂಪಾಲ್ (ಮಧ್ಯಪ್ರದೇಶ): ಬಾಲಘಾಟ್ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸ್ಥಳೀಯ ಪೊಲೀಸರು, 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲ್‌ಗಳನ್ನು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿದ ಮಧ್ಯಪ್ರದೇಶ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಕಿರ್ನಾಪುರ್ ಅರಣ್ಯ ಪ್ರದೇಶದಲ್ಲಿ ಮೂವರು ಮಹಿಳಾ ನಕ್ಸಲ್‌ಗಳು ದೊಡ್ಡ ಪ್ರಮಾಣದಲ್ಲಿ ಕೆಲ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇರೆಗೆ ದಾಳಿ ಮಾಡಲಾಗಿತ್ತು. ಛತ್ತೀಸ್‌ಗಢ, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬಾಲಘಾಟ್ ಜಿಲ್ಲೆಯಲ್ಲಿ ನಡೆದ ಪ್ರತ್ಯೋಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲ್‌ಗಳನ್ನು ಹತ್ಯೆ ಮಾಡಲಾಗಿದೆ. ಇವರ ಬಳಿ ಇದ್ದ ಕಾರ್ಟ್ರಿಜ್ಸ್ ಹಾಗೂ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.