ಡೆಹ್ರಾಡೂನ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಕುರಿತು ನಡೆಯುತ್ತಿರುವ ಸಭೆ ಮುಕ್ತಾಯಗೊಂಡಿದೆ. ಮೂರೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ತೀವ್ರ ಚರ್ಚೆ ನಡೆದಿದೆ. ಸಮಿತಿ ಅಧ್ಯಕ್ಷ ರಂಜನಾ ಪ್ರಕಾಶ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಸಭೆ ಇದಾಗಿದೆ. ಶೀಘ್ರದಲ್ಲೇ ಮೂರನೇ ಸಭೆಯೂ ಜರುಗಲಿದೆ.
ಜುಲೈ 4 ರಂದು ದೆಹಲಿಯಲ್ಲಿ ಸಮಿತಿಯ ಮೊದಲ ಸಭೆ ನಡೆದಿತ್ತು. ಸಮಿತಿಯು ಆರು ತಿಂಗಳೊಳಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.