ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರವಾಗಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ನಡುವೆ ರಹಸ್ಯ ಸಭೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ಏಕನಾಥ ಶಿಂದೆ ಸೋಮವಾರ ರಾತ್ರಿ ಶಾಸಕರೊಂದಿಗೆ ಗುಜರಾತ್ಗೆ ತೆರಳಿದ್ದರು. ಅಲ್ಲಿಂದ ಅಸ್ಸೋಂದ ಗುವಾಹಟಿಗೆ ತೆರಳಿ ಅಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ, ಇದೀಗ ಗುಜರಾತ್‌ನಲ್ಲಿ ಶುಕ್ರವಾರ ತಡರಾತ್ರಿ ಪ್ರತಿಪಕ್ಷದ ನಾಯಕರೂ ಆದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಏಕನಾಥ ಶಿಂದೆ ಮಧ್ಯೆ ರಹಸ್ಯ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.