ಕರ್ನಾಟಕ

karnataka

ETV Bharat / bharat

ನಾಳೆ 'ಸಮಾನತೆಯ ಪ್ರತಿಮೆ'ಯನ್ನು ಉದ್ಘಾಟಿಸಲಿರುವ ಪಿಎಂ ಮೋದಿ.. ಹೈದರಾಬಾದ್‌ನಲ್ಲಿ ಬಿಗಿ ಭದ್ರತೆ - ಈಸಿಆರ್​ಈಎಸ್​​ಅಟಿ ಸಮಾರಂಭ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹೈದರಾಬಾದ್‌ನ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪ್ರಧಾನಿಯವರ ಭದ್ರತೆಗಾಗಿ ಸುಮಾರು 7,000 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಶ್ರೀರಾಮನಗರದಲ್ಲೂ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ..

Security beefed up in Hyderabad ahead of PM Modi tour
ಮೋದಿ ಪ್ರವಾಸ ಹಿನ್ನೆಲೆ ಹೈದರಾಬಾದ್‌ನಲ್ಲಿ ಬಿಗಿ ಭದ್ರತೆ

By

Published : Feb 4, 2022, 2:57 PM IST

ನವದೆಹಲಿ: ICRISATನ 50ನೇ ವಾರ್ಷಿಕೋತ್ಸವದ ಪ್ರಯುಕ್ತ ಮತ್ತು 11ನೇ ಶತಮಾನದ ಭಕ್ತಿ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಹೈದರಾಬಾದ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ದಕ್ಷಿಣ ಭಾರತದ ಸಮಾಜ ಸುಧಾರಕರಲ್ಲಿ ಅತ್ಯಂತ ಪ್ರಮುಖರೆನಿಸಿದವರು ಶ್ರೀ ರಾಮಾನುಜಾಚಾರ್ಯರು. ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕರಾಗಿದ್ದ ಶ್ರೀಗಳು, ಭೂಮಿ ಮೇಲೆ ಅವತರಿಸಿ ಸಾವಿರ ವರ್ಷ ಪೂರ್ಣಗೊಂಡಿರುವ ನಿಮಿತ್ತ 216 ಅಡಿ ಎತ್ತರದ ಪ್ರತಿಮೆ ಹೈದರಾಬಾದ್‌ನ ಮುಚಿಂತಲ್​ ಎಂಬಲ್ಲಿ ಲೋಕಾರ್ಪಣೆಗೊಳ್ಳಲು ಸಿದ್ಧವಾಗಿದ್ದು, ನಾಳೆ ಪಿಎಂ ಮೋದಿ ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹೈದರಾಬಾದ್‌ನ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪ್ರಧಾನಿಯವರ ಭದ್ರತೆಗಾಗಿ ಸುಮಾರು 7,000 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಶ್ರೀರಾಮನಗರದಲ್ಲೂ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿಯವರ ಭದ್ರತೆಯ ಹೊಣೆ ಹೊತ್ತಿರುವ ಎಸ್‌ಪಿಜಿ ಅಧಿಕಾರಿಗಳು ತೆಲಂಗಾಣ ಪೊಲೀಸರೊಂದಿಗೆ ಹೈದರಾಬಾದ್‌ನಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸುತ್ತಿದ್ದಾರೆ.

ಇತ್ತೀಚೆಗೆ ಪಂಜಾಬ್‌ನಲ್ಲಿ ನಡೆದ ಪ್ರಧಾನಿ ಬೆಂಗಾವಲು ವಾಹನವನ್ನು ತಡೆದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಪ್ರಧಾನಿ ನಿರ್ಗಮನದ ವೇಳೆ, ಶಂಶಾಬಾದ್ ವಿಮಾನ ನಿಲ್ದಾಣದ ಮಾರ್ಗದಲ್ಲಿ ಪೊಲೀಸರು ದಟ್ಟಣೆಯನ್ನು ನಿಯಂತ್ರಿಸುವ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ತೆಲಂಗಾಣ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರು ಈಗಾಗಲೇ ಡಿಜಿಪಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಭದ್ರತೆ ಮತ್ತು ಸಂಚಾರ ವ್ಯವಸ್ಥೆ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ:ಶಹ್ದಾರ ಗ್ಯಾಂಗ್​ರೇಪ್​: ಕೇಂದ್ರ ಗೃಹ ಸಚಿವರಿಗೆ ಮಹಿಳಾ ಸಂಘಟನೆಗಳಿಂದ ಪತ್ರ

ಪ್ರಧಾನಿ ನಾಳೆ ಮಧ್ಯಾಹ್ನ 2 ಗಂಟೆಗೆ ವಿಶೇಷ ವಿಮಾನದಲ್ಲಿ ಬೇಗಂಪೇಟೆ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ICRISAT ಸಂಸ್ಥೆಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್‌ನಲ್ಲಿ ICRISAT ಕ್ಯಾಂಪಸ್‌ಗೆ ಹೋಗಲಿದ್ದಾರೆ. ಇದಾದ ಬಳಿಕ ರಂಗಾರೆಡ್ಡಿ ಜಿಲ್ಲೆಯ ಮುಚಿಂತಲ್‌ನಲ್ಲಿರುವ ಶ್ರೀರಾಮನಗರಕ್ಕೆ ತೆರಳಲಿದ್ದಾರೆ.

ನಂತರ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ರಸ್ತೆ ಮಾರ್ಗದ ಮೂಲಕ ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದಲ್ಲಿ ದೆಹಲಿಗೆ ಹಿಂತಿರುಗಲಿದ್ದಾರೆ.

ABOUT THE AUTHOR

...view details