ಕಂಕೇರ್: ಚತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ನಕ್ಸಲರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚತ್ತೀಸ್ಗಢದಲ್ಲಿ ಸುಧಾರಿತ ಸ್ಫೋಟಕ ಸಾಧನ ವಶಕ್ಕೆ: ಉಗ್ರರ ಸಂಚು ವಿಫಲ
ಭದ್ರತಾ ಪಡೆಗಳು ಚತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರು ಆಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ(ಐಇಡಿ)ಯನ್ನು ವಶಪಡಿಸಿಕೊಳ್ಳಲಾಗಿದೆ.
ied
ನಕ್ಸಲರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಂಕೇರ್ನಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು. ಕೊಯಲಿಬೆಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾರ್ಕನಾರ್ ಸೇತುವೆ ಬಳಿ ಮಂಗಳವಾರ ಸಂಜೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಐಇಡಿ ಅನ್ನು ವಶಪಡಿಸಿಕೊಂಡಿದೆ. ಜೊತೆಗೆ ತಕ್ಷಣವೇ ಬಾಂಬ್ ವಿಲೇವಾರಿ ದಳವು ಸ್ಥಳಕ್ಕಾಗಮಿಸಿ ಸ್ಫೋಟಕವನ್ನು ನಾಶಪಡಿಸಿದೆ.
ಈ ತಿಂಗಳ ಆರಂಭದಲ್ಲಿ ತಲಾ 5 ಕೆ.ಜಿ. ತೂಕದ ಎರಡು ಐಇಡಿಗಳನ್ನು ಬಾಂಬ್ ವಿಲೇವಾರಿ ದಳ ನಾಶಪಡಿಸಿತ್ತು. ಇದೀಗ ಕಳೆದ ಮೂರು ದಿನಗಳಲ್ಲಿ ಭದ್ರತಾ ಪಡೆಗಳು 4 ಸುಧಾರಿತ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಂಡಿವೆ.