ಜಮ್ಮು-ಕಾಶ್ಮೀರ: ಶ್ರೀನಗರದ ಹೈದರ್‌ಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಗಳು ದೌಡಾಯಿಸಿದ್ದು, ಎನ್‌ಕೌಂಟರ್ ಮುಂದುವರಿದಿದೆ.
Encounter: ಜಮ್ಮು-ಕಾಶ್ಮೀರದ ಹೈದರ್‌ಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆ - ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್
ಶ್ರೀನಗರದ ಹೈದರ್‌ಪೋರಾ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
Encounter: ಜಮ್ಮು-ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಓರ್ವ ಉಗ್ರನ ಹತ್ಯೆ
ಭದ್ರತಾ ಪಡೆಗಳು ಕೂಂಬಿಂಗ್ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಸೇನೆಯತ್ತ ಗುಂಡಿನ ದಾಳಿ ನಡೆಸಿದರು. ಆಗ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಬಂದೂಕುಧಾರಿಗಳು ಹತ್ಯೆಯಾಗಿದ್ದಾರೆ. ಮೃತರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.