ಬಾರಾಮುಲ್ಲಾ(ಜಮ್ಮು ಕಾಶ್ಮೀರ):ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಹೆಡೆಮುರಿ ಕಟ್ಟುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಶುಕ್ರವಾರ ಲಷ್ಕರ್-ಇ-ತೊಯ್ಬಾ ಉಗ್ರಗಾಮಿ ಸಂಘಟನೆಗೆ ಸೇರಿದ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಿರುವುದಾಗಿ ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
JKP, 52RR & 2 Bn SSB ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಎಲ್ಇಟಿ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಬಂಧಿಸಿವೆ. ಆತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಯುಎ(ಪಿ) ಆ್ಯಕ್ಟ್ ಮತ್ತು ಐಎ ಆ್ಯಕ್ಟ್ ಅಡಿಯಲ್ಲಿ ಪಿಎಸ್ ಕ್ರೀರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.