ಅಹಮದಾಬಾದ್(ಗುಜರಾತ್):ಗುಜರಾತ್ನಲ್ಲಿ ಪ್ರಧಾನಿ ಮೋದಿ ನಡೆಸುತ್ತಿದ್ದ ಚುನಾವಣಾ ಪ್ರಚಾರದ ವೇಳೆ ಭದ್ರತಾ ಲೋಪ ಉಂಟಾಗಿದೆ. ಅಹಮದಾಬಾದ್ ಜಿಲ್ಲೆಯ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದ ವೇಳೆ ಡ್ರೋನ್ ಹಾರಾಟ ನಡೆದಿದೆ. ಈ ಸಂಬಂಧ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಧಾನಿಯವರ ಸಾರ್ವಜನಿಕ ಸಭೆಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ 'ನೋ ಡ್ರೋನ್ ಪ್ಲೈ ಝೋನ್' ಘೋಷಣೆ ಮಾಡಿದ್ದರು. ಆದರೆ, ಈ ವೇಳೆ ಡ್ರೋನ್ ಹಾರುತ್ತಿರುವುದನ್ನು ನೋಡಿ ಎಚ್ಚೆತ್ತ ಎಲ್ಸಿಬಿ ಪೊಲೀಸರು ತಕ್ಷಣ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಬಿಡಿಡಿಎಸ್ ತಂಡವು ಡ್ರೋನ್ನ್ನು ಕೆಳಗಿಳಿಸಿ ತನಿಖೆ ನಡೆಸಿತು. ಪರಿಶೀಲಿಸಿದಾಗ ಯಾವುದೇ ರೀತಿಯ ನಿಷೇಧಿತ ವಸ್ತು ಪತ್ತೆಯಾಗಿಲ್ಲ. ಆದರೂ, ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.