ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪಥಸಂಚಲನಕ್ಕೆ ರಾಜಪಥವು ಸಂಪೂರ್ಣ ಸಜ್ಜುಗೊಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಪೊಲೀಸರು ಎಲ್ಲೆಡೆ ತಪಾಸಣೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ದೆಹಲಿ-ನೋಯ್ಡಾ ಗಡಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ವಾಹನಗಳನ್ನು ಪರಿಶೀಲನೆ ನಡೆಸಿ ಬಿಡಲಾಗುತ್ತಿದೆ.
ಅಲ್ಲದೆ, ಭಯೋತ್ಪಾದನಾ ವಿರೋಧಿ ಕ್ರಮಗಳತ್ತ ಗಮನ ಹರಿಸುತ್ತಿದ್ದೇವೆ. ನಗರದಲ್ಲಿನ ಬಾಡಿಗೆದಾರು ಮತ್ತು ಸೇವಕರ ಪರಿಶೀಲನೆ ಕಾರ್ಯವು ನಿರಂತರವಾಗಿ ಸಾಗಿದೆ. ಪರೇಡ್ ಸಾಗುವ ಮಾರ್ಗದಲ್ಲಿ ಸಿಸಿಟಿವಿಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಡಿಸಿಪಿ ಶ್ವೇತಾ ಚೌಹಾಣ್ ಹೇಳಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಪಥ ಸಂಚಲನ, ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಮೆರವಣಿಗೆ ಹಾಗೂ ನೃತ್ಯ ವೈಭವವನ್ನು ಒಳಗೊಂಡ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಕ್ರಮ ನಡೆಯಲಿದೆ. ಇದನ್ನು ಸೆರೆ ಹಿಡಿದು ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ಹಿಂಭಾಗದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದವರೆಗೆ ಅತ್ಯಾಧುನಿಕ ಒಟ್ಟು 59 ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ
ಚಿತ್ರೀಕರಣ ಕಾರ್ಯಕ್ಕಾಗಿ 160ಕ್ಕೂ ಅಧಿಕ ಸಿಬ್ಬಂದಿ ನಿಯೋಜಿಸಲಾಗಿದ್ದು, ಈ 59 ಕ್ಯಾಮೆರಾಗಳ ಪೈಕಿ 33 ಕ್ಯಾಮರಾಗಳನ್ನು ರಾಜಪಥದಲ್ಲಿ ಅಳವಡಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ 16 ಹಾಗೂ ಇಂಡಿಯಾ ಗೇಟ್, ರಾಷ್ಟ್ರೀಯ ಕ್ರೀಡಾಂಗಣ ಹಾಗೂ ರಾಷ್ಟ್ರಪತಿ ಭವನದ ಬಳಿ 10 ಕ್ಯಾಮೆರಾಗಳಿವೆ.
ಇದನ್ನೂ ಓದಿ:ಬ್ರಿಟಿಷರಿಗೆ ನಡುಕ ಹುಟ್ಟಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ... ಇಂದು ಬಲಿದಾನ ದಿನ