ಲಖನೌ(ಉತ್ತರ ಪ್ರದೇಶ):ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹದ ಪ್ರಕರಣ (ಐಪಿಸಿ ಸೆಕ್ಷನ್ 124 A) ದಾಖಲಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯುಪಿ ಪೊಲೀಸರಿಗೆ ಆದೇಶಿಸಿದ್ದಾರೆ.
ಪಾಕಿಸ್ತಾನದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದಿದ್ದನ್ನು ಸಂಭ್ರಮಿಸುವವರು ದೇಶದ್ರೋಹದ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿರುವ ಸುದ್ದಿ ಪತ್ರಿಕೆಯ ತುಣುಕೊಂದನ್ನು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.