ಕರ್ನಾಟಕ

karnataka

ETV Bharat / bharat

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ

By PTI

Published : Nov 7, 2023, 4:52 PM IST

ಬೆಂಗಳೂರು :ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 87 ವರ್ಷದ ಗೌಡರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಮಂಗಳವಾರ ಮುಂಜಾನೆ ನಿಧನರಾದರು.

"ಶ್ರೀ ಡಿ.ಬಿ. ಚಂದ್ರೇಗೌಡ ಅವರ ನಿಧನದಿಂದ ಅತೀವ ದುಃಖಿತನಾಗಿದ್ದೇನೆ. ಸಾರ್ವಜನಿಕ ಸೇವೆಯಲ್ಲಿ ಅಗ್ರಗಣ್ಯರಾಗಿದ್ದ ಚಂದ್ರೇಗೌಡರು ಕರ್ನಾಟಕದ ಸಂಸದರಾಗಿ, ಶಾಸಕರಾಗಿ, ಸಚಿವರಾಗಿ ಅಪಾರ ಅನುಭವ ಹೊಂದಿದ್ದು, ಅಳಿಸಲಾಗದ ಛಾಪು ಮೂಡಿಸಿದ್ದಾರೆ. ನಮ್ಮ ಸಂವಿಧಾನದ ಬಗ್ಗೆ ಅವರ ಆಳವಾದ ತಿಳಿವಳಿಕೆ ಮತ್ತು ಸಮುದಾಯ ಸೇವೆಯ ಬದ್ಧತೆ ಗಮನಾರ್ಹವಾಗಿದೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ" ಎಂದು ಮೋದಿ "ಎಕ್ಸ್" ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಧಾನಸಭೆ, ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಹೀಗೆ ನಾಲ್ಕೂ ಸದನಗಳನ್ನು ಪ್ರತಿನಿಧಿಸಿದ್ದ ಗೌಡರು, ಪ್ರಜಾ ಸೋಷಿಯಲಿಸ್ಟ್ ಪಾರ್ಟಿ, ಕರ್ನಾಟಕ ಕ್ರಾಂತಿ ರಂಗ, ಜನತಾ ಪಕ್ಷ, ಜನತಾದಳ, ಕಾಂಗ್ರೆಸ್ ಮತ್ತು ಬಿಜೆಪಿ ಮುಂತಾದ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡಿದ್ದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ದಾರಿ ಮಾಡಿಕೊಡಲು 1978 ರಲ್ಲಿ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅವರು ರಾಜಕೀಯವಾಗಿ ಬೆಳಕಿಗೆ ಬಂದರು ಮತ್ತು ಇಂದಿರಾ ಗಾಂಧಿಯವರ ಗೆಲುವಿಗೆ ಕೆಲಸ ಮಾಡಿದರು. ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಚಿಕ್ಕಮಗಳೂರು ಉಪಚುನಾವಣೆಯಲ್ಲಿ ಇಂದಿರಾ ಗಾಂಧಿ ಗೆದ್ದರು. ಇದು ತುರ್ತು ಪರಿಸ್ಥಿತಿಯ ನಂತರ ಕಾಂಗ್ರೆಸ್​ಗೆ ಅಗತ್ಯವಾದ ಉತ್ತೇಜನ ನೀಡಿತ್ತು.

ಗೌಡರು ಮೂರು ಬಾರಿ ಲೋಕಸಭೆ ಮತ್ತು ಒಂದು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. ಅವರು ಮೂರು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಎಂಎಲ್ಸಿಯಾಗಿದ್ದರು. ಅವರು ಒಮ್ಮೆ ರಾಜ್ಯಸಭಾ ಸಂಸದರೂ ಆಗಿದ್ದರು. 1971 ಮತ್ತು 1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ತುರ್ತು ಪರಿಸ್ಥಿತಿಯ ನಂತರ 1977 ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ತಮ್ಮ ಲೋಕಸಭಾ ಸ್ಥಾನವನ್ನು ಕಳೆದುಕೊಂಡಾಗ, ಅವರು ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲು ತಮ್ಮ ಚಿಕ್ಕಮಗಳೂರು ಲೋಕಸಭಾ ಸ್ಥಾನವನ್ನು ತ್ಯಜಿಸಿದ್ದರು. 1983ರಲ್ಲಿ ಜನತಾದಳದಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ, 1999ರಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1978ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : ನಾಲ್ಕೂ ಸದನಗಳಲ್ಲಿ ಕಾರ್ಯ, ಇಂದಿರಾ ಗಾಂಧಿಗಾಗಿ ಸ್ಥಾನ ಬಿಟ್ಟುಕೊಟ್ಟಿದ್ದ ರಾಜಕಾರಣಿ ಚಂದ್ರೇಗೌಡ

ABOUT THE AUTHOR

...view details