ಹೈದರಾಬಾದ್ : ತೆಲಂಗಾಣದ ಆರೋಗ್ಯ ಸಚಿವ ಎಟೆಲಾ ರಾಜೇಂದರ್ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಚಂದ್ರಶೇಖರ್ ರಾವ್ ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಸಚಿವರ ವಿರುದ್ಧ ಮೇದಕ್ ಜಿಲ್ಲೆಯ ಮಸಾಯಿಪೇಟ್ ಮಂಡಲದ ಅಚಾಂಪೇಟ್ ಹೊರವಲಯದಲ್ಲಿರುವ ಜಮೀನು ಅತಿಕ್ರಮಣ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರು ಮೇದಕ್ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ನೀಡುವ ವರದಿಯನ್ನು ಸಿಎಂಗೆ ಸಲ್ಲಿಸಲಿದ್ದಾರೆ. ಇದರ ಜೊತೆಗೆ, ಡಿಜಿಪಿ ಪೂರ್ಣಚಂದ್ರ ರಾವ್ ಅವರಿಗೂ ಪ್ರಕರಣದ ಸತ್ಯಾಸತ್ಯತೆ ತಿಳಿಯುವಂತೆ ಸಿಎಂ ಸೂಚಿಸಿದ್ದಾರೆ.