ಅನಂತಪುರ್ (ಆಂಧ್ರಪ್ರದೇಶ):ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ 7 ಮಂದಿ ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ. ಜಿಲ್ಲೆಯ ಕೊಟ್ಟಳಪಲ್ಲಿ ಬಳಿ ಆಟೋ-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ 5 ಮಂದಿ ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹತ್ತಿ ಬೆಳೆ ಬಿಡಿಸಲು ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛಿದ್ರವಾಗಿದ್ದವು. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.