ಗುನಾ(ಮಧ್ಯಪ್ರದೇಶ):ಕೆಲಸಕ್ಕಾಗಿ ಗುಜರಾತ್ಗೆ ತೆರಳಿದ್ದ ಮಧ್ಯಪ್ರದೇಶದ ಒಂದೇ ಕುಟುಂಬದ ಏಳು ಮಂದಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಹಮದಾಬಾದ್‌ನಲ್ಲಿ ಸಾವನ್ನಪ್ಪಿದ್ದು, ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಮಕ್ಕಳೂ ಇದ್ದಾರೆ.
ದುರ್ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಸಂತಾಪ ಸೂಚಿಸಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮೃತರ ಸಂಬಂಧಿಕರಿಗೆ 4 ಲಕ್ಷ ರೂಪಾಯಿ ಮತ್ತು ಮೃತ ಮಕ್ಕಳ ಸಂಬಂಧಿಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.