ಮಥುರಾ(ಉತ್ತರಪ್ರದೇಶ):ಇಲ್ಲಿನ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಬೆಳ್ಳಂಬೆಳಗ್ಗೆ ಟ್ಯಾಂಕರ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ.
ಟ್ಯಾಂಕರ್ ಮತ್ತು ಕಾರ್ ನಡುವೆ ಭೀಕರ ಅಪಘಾತ: ಏಳು ಮಂದಿ ದುರ್ಮರಣ - Seven persons died in car accident
06:13 February 24
ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಹರಿಯಾಣದಿಂದ ದೆಹಲಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್ ಕಾರಿಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಶವಪರೀಕ್ಷೆಗೆ ರವಾನಿಸಿರುವುದಾಗಿ ಮಥುರಾ ಎಸ್ಎಸ್ಪಿ ಗೌರವ್ ಗ್ರೋವರ್ ತಿಳಿಸಿದ್ದಾರೆ. ಟ್ಯಾಂಕರ್ ಆಯಿಲ್ ರಸ್ತೆಯಲ್ಲಿ ಸೋರಿಕೆಯಾದ ಹಿನ್ನೆಲೆ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಇದನ್ನೂ ಓದಿ:ಸ್ಫೋಟದ ಸ್ಥಳಕ್ಕೆ ತಡರಾತ್ರಿ ಸಚಿವ ಮುರುಗೇಶ್ ನಿರಾಣಿ ಭೇಟಿ, ಪರಿಶೀಲನೆ