ನವದೆಹಲಿ:ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ 117 ಸ್ಥಾನಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಬರೆದಿದೆ. ಈ ಐತಿಹಾಸಿಕ ಜಯ ಇತರ ರಾಜ್ಯಗಳಲ್ಲೂ ಆಪ್ ಬಲವರ್ದನೆಗೆ ವೇದಿಕೆ ಒದಗಿಸಿದೆ. ಹರಿಯಾಣದ ಮಾಜಿ ಶಾಸಕರು, ಸಚಿವರು ಮತ್ತು ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ನಾಯಕರು ಸೋಮವಾರ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾದರು.
ಹಲವು ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸತ್ಯೇಂದ್ರ ಜೈನ್, ಹರ್ಯಾಣದ ವಿವಿಧ ಸಚಿವರು, ಶಾಸಕರು ಮತ್ತು ಸಾಮಾಜಿಕ ಕಾರ್ಯಕರ್ತರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಘೋಷಿಸಲು ನಮಗೆ ತುಂಬಾ ಸಂತಸವಾಗ್ತಿದೆ. ಹರಿಯಾಣದ ಜನರು ಎಎಪಿ ಅಧಿಕಾರಕ್ಕೆ ತರಲು ಉತ್ಸುಕರಾಗಿದ್ದಾರೆ ಎಂದು ಅವರು ಇದೇ ವೇಳೆ, ಹೇಳಿದರು.