ಇಂಫಾಲ್ (ಮಣಿಪುರ): ಶಾಲಾ ಬಸ್ ಪಲ್ಟಿಯಾಗಿ ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟು, ಸುಮಾರು 20 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಾಜಧಾನಿ ಇಂಫಾಲ್‌ನಿಂದ ಸುಮಾರು 55 ಕಿಮೀ ದೂರದಲ್ಲಿರುವ ನೋನಿ ಜಿಲ್ಲೆಯ ಲಾಂಗ್‌ಸೈ ಪ್ರದೇಶದ ಬಳಿ ಈ ದುರ್ಘಟನೆ ಸಂಭವಿಸಿದೆ. ಶಾಲಾ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ನೋನಿ ಜಿಲ್ಲೆಯ ಖೌಪುಮ್‌ಗೆ ವಾರ್ಷಿಕ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದರು ಎಂದು ಗೊತ್ತಾಗಿದೆ.