ಕರ್ನಾಟಕ

karnataka

ETV Bharat / bharat

ಕೇರಳದಲ್ಲಿ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆ : 18 ಮಂದಿ ದುರ್ಮರಣ - Parappangadi Malappuram

ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆಯಾಗಿ 18 ಮಂದಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೆಟ್ಟುಂಗಲ್ ಬೀಚ್‌ನಲ್ಲಿ ನಡೆದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

several-tourists-died-in-boat-accident-parappangadi-malappuram
ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆ : 12 ಮಂದಿ ದುರ್ಮರಣ

By

Published : May 7, 2023, 11:02 PM IST

Updated : May 8, 2023, 7:22 AM IST

ಕೇರಳದಲ್ಲಿ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆ : 18 ಮಂದಿ ದುರ್ಮರಣ

ಮಲಪ್ಪುರಂ (ಕೇರಳ): ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆಯಾಗಿ ಸುಮಾರು 18 ಮಂದಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಪರಪನಂಗಡಿಯ ಕೆಟ್ಟುಂಗಲ್ ಬೀಚ್‌ನಲ್ಲಿ ಭಾನುವಾರ ಸಂಜೆ 7.30ರ ಸುಮಾರಿಗೆ ಅವಘಡ ಸಂಭವಿಸಿದೆ. ದೋಣಿಯಲ್ಲಿ 25ಕ್ಕೂ ಹೆಚ್ಚು ಮಂದಿ ಇದ್ದರು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ದೋಣಿಯಲ್ಲಿ ಹೆಚ್ಚು ಜನರನ್ನು ಸಾಗಿಸಿದ ಕಾರಣ ದೋಣಿ ಮುಳುಗಡೆಯಾಗಿದೆ ಎಂದು ಹೇಳಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ದೋಣಿ ಮುಳುಗಡೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆರೋಗ್ಯ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳನ್ನು ಪರಪ್ಪನಂಗಡಿ, ತಾನೂರ್, ತಿರೂರು ಮತ್ತು ತಿರುರಂಗಡಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ :ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಬಸ್​ : ಐವರು ದುರ್ಮರಣ

Last Updated : May 8, 2023, 7:22 AM IST

ABOUT THE AUTHOR

...view details