ಕರ್ನಾಟಕ

karnataka

ETV Bharat / bharat

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು - ಶರದ್ ಪವಾರ್

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Sharad Pawar
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

By

Published : Oct 31, 2022, 1:27 PM IST

ಮುಂಬೈ(ಮಹಾರಾಷ್ಟ್ರ):ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

'ಪವಾರ್ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರೇ ಸಲಹೆ ನೀಡಿದ್ದರು. ಮುಂದಿನ ಮೂರು ದಿನಗಳ ಕಾಲ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ನವೆಂಬರ್ 2 ರಂದು ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಶಿವಾಜಿರಾವ್ ಗರ್ಜೆ ಮಾಹಿತಿ ನೀಡಿದ್ದಾರೆ.

ಈ ಅವಧಿಯಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಆವರಣದಲ್ಲಿ ನೂಕುನುಗ್ಗಲು ಉಂಟಾಗದಂತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಶರದ್ ಪವಾರ್ ನವೆಂಬರ್ 3 ರಂದು ಶಿರಡಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಶರದ್ ಪವಾರ್ ಕಳೆದ ವರ್ಷ ಮಾರ್ಚ್‌ನಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದನ್ನೂ ಓದಿ:ಶಸ್ತ್ರಚಿಕಿತ್ಸೆ ನಂತರ ಶರದ್ ಪವಾರ್ ಆರೋಗ್ಯ ಉತ್ತಮವಾಗಿದೆ: ರಾಜೇಶ್ ಟೊಪೆ ಸ್ಪಷ್ಟನೆ

ABOUT THE AUTHOR

...view details