ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ 2019ರಲ್ಲಿ ಬಿಜೆಪಿ ಸರ್ಕಾರ ಪತನವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಜೊತೆ ಮೈತ್ರಿ ಮಾಡಿಕೊಳ್ಳಲು ಕೇಳಿಕೊಂಡಿದ್ದರು ಎಂದು ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿಕೆ ನೀಡಿದ್ದು, ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿರುವ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚನೆಗೆ ಎನ್ಸಿಪಿಯ ಬೆಂಬಲ ಕೋರಿದ್ದರು. ಇದಲ್ಲದೇ, ಮೈತ್ರಿ ಮಾಡಿಕೊಂಡರೆ ತಮ್ಮ ಪುತ್ರಿ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಹುದ್ದೆ ನೀಡುವ ಆಶ್ವಾಸನೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.
ಆದರೆ, ಪ್ರಧಾನಿ ಮೋದಿ ಅವರ ಈ ಪ್ರಸ್ತಾವವನ್ನು ನಾನು ತಿರಸ್ಕರಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಎನ್‌ಸಿಪಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಎರಡೂ ಪಕ್ಷಗಳು ವಿರುದ್ಧ ಸಿದ್ಧಾಂತಗಳನ್ನು ಅನುಸರಿಸುತ್ತಿವೆ ಎಂದು ಪ್ರಧಾನಿ ಕಚೇರಿಯಲ್ಲೇ ಮೋದಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.
ಪ್ರಧಾನಿ ಮನವಿ ತಿರಸ್ಕರಿಸಿದ್ದ ಪವಾರ್