ಮುಂಬೈ: ಪಿತ್ತಕೋಶದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಲಿದ್ದಾರೆ ಎಂದು ಅವರ ಸಂಬಂಧಿ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಬ್ರೀಚ್ನ ಕ್ಯಾಂಡಿ ಆಸ್ಪತ್ರೆಯಲ್ಲಿ ಶರದ್ ಪವಾರ್ ಅವರನ್ನು ಭೇಟಿಯಾದ ಅಜಿತ್ ಪವಾರ್ ಮತ್ತು ಅವರ ಪತ್ನಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಶರದ್ ಪವಾರ್ ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿಸಿದರು.