ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ದೆಹಲಿಯ ಗಡಿಯಲ್ಲಿ ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಇಲ್ಲಿ ನಡೆಸಲಾಗುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸಚಿವ ನವಾಬ್ ಮಲಿಕ್ ಮಂಗಳವಾರ ತಿಳಿಸಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯಲ್ಲಿ ಶರದ್ ಪವಾರ್, ಉದ್ಧವ್ ಠಾಕ್ರೆ ಭಾಗಿ - ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್
ಕೆಲವು ರೈತರ ಸಂಘಟನೆಗಳು ಜನವರಿ 23 ರಿಂದ ಜನವರಿ 25 ರವರೆಗೆ ಮುಂಬೈನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿವೆ. ಜನವರಿ 25 ರಂದು ಆಜಾದ್ ಮೈದಾನದಲ್ಲಿ(ದಕ್ಷಿಣ ಮುಂಬೈ) ನಡೆಯಲಿರುವ ಪ್ರತಿಭಟನೆಯಲ್ಲಿ ಪವಾರ್ ಭಾಗವಹಿಸಲಿದ್ದಾರೆ. ಕೃಷಿ ಕಾನೂನುಗಳನ್ನು ಎನ್‌ಸಿಪಿ ವಿರೋಧಿಸಿದೆ. ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಗಾದಿ ನಾಯಕರು ಸಹ ಭಾಗವಹಿಸಲಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ
"ಕೆಲವು ರೈತರ ಸಂಘಟನೆಗಳು ಜನವರಿ 23 ರಿಂದ ಜನವರಿ 25 ರವರೆಗೆ ಮುಂಬೈನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿವೆ. ಜನವರಿ 25 ರಂದು ಆಜಾದ್ ಮೈದಾನದಲ್ಲಿ(ದಕ್ಷಿಣ ಮುಂಬೈ) ನಡೆಯಲಿರುವ ಪ್ರತಿಭಟನೆಯಲ್ಲಿ ಪವಾರ್ ಭಾಗವಹಿಸಲಿದ್ದಾರೆ. ಕೃಷಿ ಕಾನೂನುಗಳನ್ನು ಎನ್‌ಸಿಪಿ ವಿರೋಧಿಸಿದೆ. ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ನಾಯಕರು ಸಹ ಭಾಗವಹಿಸಲಿದ್ದಾರೆ" ಎಂದು ಎನ್‌ಸಿಪಿಯ ರಾಷ್ಟ್ರೀಯ ವಕ್ತಾರರಾದ ಮಲಿಕ್ ಹೇಳಿದರು.