ನವದೆಹಲಿ:ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಿರುವುದು ಒಳ್ಳೆಯ ವಿಚಾರ. ನಾನು ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸ್ಪರ್ಧೆಗೆ ಕೆಲವು ವಾರಗಳು ಬಾಕಿ ಇವೆ. ಸ್ವಲ್ಪ ಸಮಯ ಕಾದು ನೋಡೋಣ ಎಂದು ಸಂಸದ ಶಶಿ ತರೂರ್ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಸ್ಪರ್ಧೆ? ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯೆ - Etv bharat kannada
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಿ-23 ಗುಂಪಿನ ಸದಸ್ಯ, ಪಕ್ಷದ ಹಿರಿಯ ನಾಯಕ ಶಶಿ ತರೂರ್ ಸ್ಪರ್ಧಿಸುವ ಮಾತು ಕೇಳಿ ಬರ್ತಿದೆ. ಇದಕ್ಕೆ ಅವರು ಹೇಳಿದ್ದೇನು ಗೊತ್ತೇ?

ಜನರು ತಮಗೆ ಬಂದ ರೀತಿಯಲ್ಲಿ ಊಹಾಪೋಹ ಹರಡುವ ಅಧಿಕಾರ, ಸ್ವಾತಂತ್ರ್ಯ ಹೊಂದಿದ್ದಾರೆ. ಪಕ್ಷದಲ್ಲಿ ಚುನಾವಣೆ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಇದನ್ನು ನಾನು ನನ್ನ ಲೇಖನದಲ್ಲಿ ಉಲ್ಲೇಖಿಸಿದ್ದೇನೆ. ಆದರೆ, ಸ್ಪರ್ಧಿಸುವ ಮಾಡುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ ಎಂದರು. ಇದೇ ವೇಳೆ, ನನಗೆ ಎಲ್ಲ ಆಯ್ಕೆಗಳು ಮುಕ್ತವಾಗಿವೆ. ನಾನು ಲೋಕಸಭೆ ಸಂಸದ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜಕೀಯ ತಿಳಿದುಕೊಂಡಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆ ಮುಕ್ತ ಮತ್ತು ನ್ಯಾಯಯುತವಾಗಿ ನಡೆಯಬೇಕೆಂದು ಶಶಿ ತರೂರ್ ಈಗಾಗಗಲೇ ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಮಲಯಾಳಂ ದೈನಿಕವೊಂದರಲ್ಲಿ ಲೇಖನ ಬರೆದಿದ್ದು ಗಮನ ಸೆಳೆದಿದೆ.