ಕರ್ನಾಟಕ

karnataka

ETV Bharat / bharat

ಪ್ರಾಣ ಪಣಕ್ಕಿಟ್ಟು 'ತೇಜಸ್​' ರಕ್ಷಿಸಿದ್ದ ವರುಣ್​ ಸಿಂಗ್​​ಗೆ ಸಿಕ್ಕಿತ್ತು 'ಶೌರ್ಯ ಚಕ್ರ'ದ ಗೌರವ - ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತಿ ವರುಣ್‌ ಸಿಂಗ್‌

Group Captain Varun Singh Passes away: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿರುವ ವಾಯುಸೇನೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ತೇಜಸ್‌ ಯುದ್ಧ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದಕ್ಕಾಗಿ ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಸ್ವೀಕರಿಸಿದ್ದರು.

Shaurya Chakra awardee IAF Group Captain Varun Singh
ತೇಜಸ್ ಯುದ್ಧ ವಿಮಾನ ಸುರಕ್ಷಿತ ಲ್ಯಾಂಡಿಂಗ್‌ಗಾಗಿ ವರುಣ್‌ ಸಿಂಗ್‌ಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವ

By

Published : Dec 15, 2021, 2:28 PM IST

Updated : Dec 15, 2021, 3:19 PM IST

ಬೆಂಗಳೂರು:ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಇಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ತೇಜಸ್ ಯುದ್ಧ ವಿಮಾನ ಸುರಕ್ಷಿತ ಲ್ಯಾಂಡಿಂಗ್‌ ಮಾಡಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌

ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ವರುಣ್ ಸಿಂಗ್ ಗಡಿ ನಿಯಂತ್ರಣ ರೇಖೆ ಬಳಿ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದ್ದರು. ಅವರ ಈ ಅಸಾಧಾರಣ ಸಾಹಸವನ್ನು ಗುರುತಿಸಿದ್ದ ಕೇಂದ್ರ ಸರ್ಕಾರ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಿತ್ತು.

ಶೌರ್ಯ ಚಕ್ರ ಪ್ರಶಸ್ತಿ

ಕಳೆದ ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ವರುಣ್‌ ಸಿಂಗ್‌ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದ್ದರು.

ಪತ್ನಿ ಮಕ್ಕಳೊಂದಿಗೆ ವರುಣ್‌ ಸಿಂಗ್‌

ಇದನ್ನೂ ಓದಿ:ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಹುತಾತ್ಮ: ಪ್ರಧಾನಿ ಮೋದಿ ಸಂತಾಪ

Last Updated : Dec 15, 2021, 3:19 PM IST

ABOUT THE AUTHOR

...view details