ಮುಂಬೈ(ಮಹಾರಾಷ್ಟ್ರ):ಪಡೆದ ಸಾಲವನ್ನು ಮರುಪಾವತಿ ಮಾಡದ ಆರೋಪದಲ್ಲಿ ಸಲ್ಲಿಕೆಯಾದ ದೂರಿನ ಅನ್ವಯ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಸಹೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ಅವರಿಗೆ ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಉದ್ಯಮಿ ಪರ್ಹಾದ್ ಅಮ್ರಾ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ. ಫೆಬ್ರವರಿ 28ರಂದು ಮೂವರೂ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿಸಿದೆ.