ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿರುವ ನೂತನ ಶಿಂದೆ ಸರ್ಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದಾರೆ. ಈ ಮೂಲಕ ಪೆಟ್ರೋಲ್ ಪ್ರತಿ ಲೀಟರ್ಗೆ 5 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ಗೆ 3 ರೂಪಾಯಿ ಇಳಿಕೆಯಾಗಿದೆ. ಇಂದು ನಡೆಸ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಶಿಂದೆ ಘೋಷಣೆ ಮಾಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನ ಅಲಂಕಾರ ಮಾಡಿದ್ದ ಏಕನಾಥ್ ಶಿಂದೆ ರಾಜ್ಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿತಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದ ವಾಹನ ಸವಾರರಿಗೆ ಬಿಗ್ ಗಿಫ್ಟ್ ನೀಡಿದ್ದಾರೆ.
ತೈಲ ದರದಲ್ಲಿ ತೆರಿಗೆ ಕಡಿತ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 6000 ಕೋಟಿ ಹೆಚ್ಚಿನ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಶಿಂದೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ತೆಗೆದುಕೊಂಡಿರುವ ನಿರ್ಧಾರಕ್ಕೆ ಡೆಪ್ಯುಟಿ ಸಿಎಂ ದೇವೇಂದ್ರ ಫಡ್ನವೀಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ರಾಜ್ಯದ ಜನರಿಗೆ ನೆಮ್ಮದಿ ಎಂದು ಹೇಳಿದ್ದಾರೆ.
2019ರ ವಿಧಾನಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ್ದ ಮಹಾವಿಕಾಸ್ ಅಘಾಡಿ ವಿರುದ್ಧ ಶಿವಸೇನೆಯ ಏಕನಾಥ್ ಶಿಂದೆ ಬಳಗ ಬಂಡಾಯದ ಬಾವುಟ ಹಾರಿಸಿದ್ದು, ಸದ್ಯ ಬಿಜೆಪಿ ಜೊತೆ ಮೈತ್ರಿಮಾಡಿಕೊಂಡು ಸರ್ಕಾರ ರಚನೆ ಮಾಡಿದೆ.
ಇದನ್ನು ಓದಿ:ಸ್ಟಾಲ್ನಲ್ಲಿ ಮೊಮೊಸ್ ತಯಾರಿಸಿದ ದೀದಿ.. ಸಿಎಂ ಮಮತಾ ಬ್ಯಾನರ್ಜಿ ಪಾಕ ಕೌಶಲ್ಯಕ್ಕೆ ಬೆರಗಾದ ಜನ