ಕರ್ನಾಟಕ

karnataka

ETV Bharat / bharat

ಕರ್ನಾಟಕ ಸಿಎಂ ವಿರುದ್ಧ ಮಾತನಾಡಲು ಶಿಂಧೆಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ - border dispute between Maharashtra and Karnataka

ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡುವ ಧೈರ್ಯವಿಲ್ಲ ಎಂದು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದರು.

Uddhav Thackeray
ಉದ್ಧವ್ ಠಾಕ್ರೆ

By

Published : Nov 25, 2022, 11:45 AM IST

ಮುಂಬೈ: ದಿನದಿಂದ ದಿನಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಬಿಸಿ ಹೆಚ್ಚುತ್ತಿದೆ. ಈ ಮಧ್ಯೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಿಎಂ ಏಕನಾಥ್ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ್ದು, ನಮ್ಮ ಮುಖ್ಯಮಂತ್ರಿಗಳಿಗೆ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡುವ ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಹಲವು ಗಡಿ ಗ್ರಾಮಗಳು ತಮ್ಮ ರಾಜ್ಯದ ಭಾಗವೆಂಬ ಬಸವರಾಜ ಬೊಮ್ಮಾಯಿ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಕರ್ನಾಟಕ ಸಿಎಂಗೆ ದೆಹಲಿಯ ಆಶೀರ್ವಾದವಿದೆಯೇ?, ಅಥವಾ ಕೇಂದ್ರಕ್ಕೂ ಅದೇ ಬೇಕೇ?, ಬೊಮ್ಮಾಯಿ ಮಹಾರಾಷ್ಟ್ರದ ಹಳ್ಳಿಗಳ ಮೇಲೆ ಸುಲಭವಾಗಿ ಹಕ್ಕು ಸಾಧಿಸಲು ಪ್ರಯತ್ನಿಸುತ್ತಿರುವುದರಿಂದ ನಾವೇನು ಧೈರ್ಯ ಕಳೆದುಕೊಂಡಿದ್ದೇವೆಯೇ? ಎಂದು ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಮಹಾರಾಷ್ಟ್ರದ ಒಂದಿಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ: ಏಕನಾಥ್ ಶಿಂಧೆ

ಬಳಿಕ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಭಾರತೀಯ ಜನತಾ ಪಕ್ಷವು ಕರ್ನಾಟಕದ ಗಡಿ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕವು ನಿಪ್ಪಾಣಿ, ಬೆಳಗಾವಿ ಗ್ರಾಮಗಳನ್ನು ಹಿಂದಿರುಗಿಸಲು ಬಯಸಿದರೆ ಸ್ವಲ್ಪ ವಿನಿಮಯ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಆಟೋರಿಕ್ಷಾ ಮರ್ಸಿಡಿಸ್​ ಕಾರನ್ನು ಮೀರಿಸಿದೆ: ಉದ್ಧವ್​ ಠಾಕ್ರೆಗೆ ಸಿಎಂ ಶಿಂದೆ ತಿರುಗೇಟು

ABOUT THE AUTHOR

...view details