ಕರ್ನಾಟಕ

karnataka

ETV Bharat / bharat

ಆರ್ಯನ್ ಖಾನ್ ಪ್ರಕರಣ: ಎನ್​ಸಿಬಿ ವಿರುದ್ಧ ತನಿಖೆಗೆ ಆಗ್ರಹಿಸಿ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ಮುಖಂಡ

ಎನ್​ಸಿಬಿಯ ವ್ಯವಹಾರಗಳು ಹಾಗೂ ಅದರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಮೂಲ ಹಕ್ಕುಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಶಿವಸೇನೆ ಮುಖಂಡ
ಶಿವಸೇನೆ ಮುಖಂಡ

By

Published : Oct 19, 2021, 10:33 PM IST

ಮುಂಬೈ (ಮಹಾರಾಷ್ಟ್ರ):ಶಿವಸೇನಾ ಮುಖಂಡ ಕಿಶೋರ್ ತಿವಾರಿ ಆರ್ಯನ್ ಖಾನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆರ್ಯನ್​ ಖಾನ್​ ಬಂಧನಕ್ಕೆ ಸಂಬಂಧಿಸಿದಂತೆ ಎನ್​ಸಿಬಿ ಅಧಿಕಾರಿಗಳ ಕಾರ್ಯದಲ್ಲಿ ಸುಪ್ರೀಂಕೋರ್ಟ್​ ಮಧ್ಯ ಪ್ರವೇಶಿಸಬೇಕು ಎಂದು ಕಿಶೋರ್​ ತಿವಾರಿ ಮನವಿ ಮಾಡಿದ್ದಾರೆ.

ಕಿಶೋರ್ ತಿವಾರಿ ಮಾನವ ಹಕ್ಕುಗಳನ್ನು ರಕ್ಷಿಸಲು ಮತ್ತು ಅಧಿಕಾರದ ದುರುಪಯೋಗ ನಿಲ್ಲಿಸಲು ಎನ್‌ಸಿಬಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಿಶೋರ್​ ತಿವಾರಿ ಅವರು ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಕೆಲವು ಆರೋಪಗಳನ್ನು ಹೊರಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಮುಂಬೈನ ಎನ್‌ಸಿಬಿ ದಾಳಿ ನಡೆಸುತ್ತಲೇ ಇದೆ. ಈ ಕುರಿತು ವಿಶೇಷ ನ್ಯಾಯಾಂಗ ತನಿಖೆ ನಡೆಸಲು ಕೋರ್ಟ್ ಆದೇಶಿಸಬೇಕೆಂದು ಕೋರುತ್ತೇನೆ ಎಂದು ಕಿಶೋರ್ ತಿವಾರಿ ಮನವಿ ಮಾಡಿದ್ದಾರೆ.

ಎನ್​ಸಿಬಿಯ ವ್ಯವಹಾರಗಳು ಹಾಗೂ ಅದರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಮೂಲ ಹಕ್ಕುಗಳನ್ನು ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ.

ABOUT THE AUTHOR

...view details