ಮುಂಬೈ, ಮಹಾರಾಷ್ಟ್ರ: ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಶಿವಸೇನಾ ಶಾಸಕನ ಪತ್ನಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ - ಶಿವಸೇನಾ ಶಾಸಕನ ಪತ್ನಿ ರಜನಿ ಆತ್ಮಹತ್ಯೆ
ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮುಂಬೈ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
![ಶಿವಸೇನಾ ಶಾಸಕನ ಪತ್ನಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Shiv Sena MLA Mangesh Kudalkar's wife Rajani was found hanging at her residence](https://etvbharatimages.akamaized.net/etvbharat/prod-images/768-512-15044893-thumbnail-3x2-raaaaa.jpg)
ಶಿವಸೇನಾ ಶಾಸಕನ ಪತ್ನಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಹಿರಿಯ ಅಧಿಕಾರಿಗಳು ಘಟನೆ ನಡೆದ ಶಾಸಕರ ನಿವಾಸಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ.