ಮುಂಬೈ(ಮಹಾರಾಷ್ಟ್ರ):ಪತ್ರಾ ಚಾಲ್ ಭೂ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ವಿಚಾರಣೆ ಮುಂದುವರೆದಿದೆ. ಇಂದು ಈ ಕುರಿತ ವಿಚಾರಣೆ ನಡೆಸಿದ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ರಾವುತ್ ಇಡಿ ಕಸ್ಟಡಿ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿ ಆದೇಶಿಸಿದೆೆ.
ವಿಚಾರಣೆಯ ಸಂದರ್ಭದಲ್ಲಿ, "ಸೆಲ್ನಲ್ಲಿ ನಿಮಗೆ ಏನಾದ್ರೂ ಸಮಸ್ಯೆ ಇದೆಯೇ?" ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಆಗ ರಾವುತ್ "ಸರಿಯಾದ ಗಾಳಿ ಬರುತ್ತಿಲ್ಲ" ಎಂದು ಹೇಳಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿರುವ ಇಡಿ ವಕೀಲರು, ಅವರನ್ನು ಇರಿಸಿರುವ ಕಚೇರಿಯಲ್ಲಿ ಎಸಿ ವ್ಯವಸ್ಥೆ ಇದೆ. ರಾವುತ್ ಸುಳ್ಳು ಹೇಳುತ್ತಿದ್ದಾರೆಂದು ತಿಳಿಸಿದರು.