ಚಿತ್ರದುರ್ಗ:ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ವಿವರ:ಗುರುವಾರತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ಕಾನೂನು ಪ್ರಕಾರ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್, ಶ್ರೀಗಳನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತು. ಇದರ ಬೆನ್ನಲ್ಲೇ ಶ್ರೀಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.