ಕರ್ನಾಟಕ

karnataka

ETV Bharat / bharat

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಅಮಿತ್ ಶಾ ಭೇಟಿ ಮಾಡಿದ ಶೋಭಾ ಕರಂದ್ಲಾಜೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಭಾ ಕರಂದ್ಲಾಜೆ ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

Shobha Karandlaje Meets Home Minister Amit Shah
Shobha Karandlaje Meets Home Minister Amit Shah

By

Published : Aug 2, 2022, 8:30 PM IST

ನವದೆಹಲಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಎನ್​ಐಎ ತನಿಖೆಗೆ ವಹಿಸಿ ಆದೇಶ ಹೊರಹಾಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದಾರೆ. ಕೇರಳದ ಗಡಿ ಭಾಗ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ದೇಶದ್ರೋಹಿ, ಹಿಂಸಾತ್ಮಕ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಜತೆಗೆ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆಯೂ ಮನವಿ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಎನ್​ಐಎ ಕಚೇರಿಯನ್ನು ಬೆಂಗಳೂರಿಗೂ ವಿಸ್ತರಿಸಲು ಕೇಂದ್ರ ಗೃಹ ಸಚಿವರ ಬಳಿ ಶೋಭಾ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ, ಪ್ರವೀಣ್ ನೆಟ್ಟಾರು ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಕೊಲೆ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ABOUT THE AUTHOR

...view details