ನವದೆಹಲಿ:ಡಾ. ಕರ್ಣಿ ಸಿಂಗ್ ಶೂಟಿಂಗ್ ಶ್ರೇಣಿಯಲ್ಲಿ (ಡಿಕೆಎಸ್ಎಸ್ಆರ್) ಶುಕ್ರವಾರ ಪ್ರಾರಂಭವಾದ ಅಂತಾರಾಷ್ಟ್ರೀಯ ಶೂಟಿಂಗ್ ಸ್ಪೋರ್ಟ್ ಫೆಡರೇಶನ್ (ಐಎಸ್ಎಸ್ಎಫ್) ವಿಶ್ವಕಪ್ ರೈಫಲ್ / ಪಿಸ್ತೂಲ್ / ಶಾಟ್ಗನ್ನಲ್ಲಿ ಇನ್ನೂ ಇಬ್ಬರು ಭಾರತೀಯ ಶೂಟರ್‌ಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಇಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ (ಎನ್‌ಆರ್‌ಎಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.