ಶೋಪಿಯಾನ್(ಜಮ್ಮು ಮತ್ತು ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಕಥೋಹಾಲನ್ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ನೊಂದಿಗೆ (ಟಿಆರ್‌ಎಫ್) ಸಂಬಂಧ ಹೊಂದಿದ್ದ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ.
ಬಿಎಸ್‌ಎಫ್ ಯೋಧ ಸಾವು:ಮತ್ತೊಂದೆಡೆ, ಸಾಂಬಾ ಜಿಲ್ಲೆಯ ರಾಮಗಢ ಮತ್ತು ಅರ್ನಿಯಾ ಸೆಕ್ಟರ್ ಗಡಿಯಲ್ಲಿ ಬುಧವಾರ ರಾತ್ರಿ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಕದನ ವಿರಾಮ ಉಲ್ಲಂಘಿಸಿದ್ದಾರೆ. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮೊದಲು ಯೋಧನಿಗೆ ರಾಮಗಢದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಸೇನಾಸ್ಪತ್ರೆಗೆ ರವಾನಿಸಲಾಗಿತ್ತು.
ಇದನ್ನೂ ಓದಿ :ಮಾವೋವಾದಿಗಳ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನ ಪತ್ತೆ ಹಚ್ಚಿದ ಬಿಎಸ್‌ಎಫ್ ಪಡೆ