ನವದೆಹಲಿ: ದೇಶಾದಂತ್ಯ ಚರ್ಚೆಗೆ ಕಾರಣವಾಗಿದ್ದ ಶ್ರದ್ಧಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ವಕೀಲರ ಮೂಲಕ ಸಾಕೇತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಯು ನ್ಯಾಯಾಲಯದಲ್ಲಿ ಎರಡು ಹೊಸ ಅರ್ಜಿಗಳನ್ನು ನೀಡಿದ್ದು, ಅದರಲ್ಲಿ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರವನ್ನು ಬಿಡುಗಡೆ ಮಾಡಲು ಮತ್ತು ಜೈಲಿನೊಳಗೆ ಸ್ಟೇಷನರಿ ಒದಗಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಇದಲ್ಲದೇ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ನ ಸ್ಪಷ್ಟ ಹಾರ್ಡ್ ಕಾಪಿ ಮತ್ತು ಸಾಫ್ಟ್ ಕಾಪಿಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ. ಕಳೆದ ಬಾರಿ ಚಾರ್ಜ್ ಶೀಟ್ ಸಲ್ಲಿಸುವಾಗ ಪೊಲೀಸರು ಸಾಫ್ಟ್ ಕಾಪಿಯಲ್ಲಿ ಲಭ್ಯವಾದ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ ಎಂದು ಆರೋಪಿಗಳ ಪರ ವಕೀಲರು ತಿಳಿಸಿದ್ದಾರೆ. ಇದಕ್ಕಾಗಿ ಇದೀಗ ಸ್ಪಷ್ಟ ಪ್ರತಿ ನೀಡುವಂತೆ ಆಗ್ರಹಿಸಿದ್ದಾರೆ. ಸಾಕೇತ್ ಕೋರ್ಟ್‌ನಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಅವರ ನ್ಯಾಯಾಲಯದಲ್ಲಿ ಎರಡೂ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಎರಡೂ ಅರ್ಜಿಗಳನ್ನು ನ್ಯಾಯಾಲಯ ಶೀಘ್ರದಲ್ಲೇ ವಿಚಾರಣೆ ನಡೆಸಲಿದೆ.
ಇದಕ್ಕೂ ಮುನ್ನ ಆರೋಪಿ ಅಫ್ತಾಬ್ ಜನವರಿ 6ರಂದು ಸಾಕೇತ್ ನ್ಯಾಯಾಲಯದಲ್ಲಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಮೊದಲ ಅರ್ಜಿಯಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಅದೇ ಸಮಯದಲ್ಲಿ, ಎರಡನೇ ಅರ್ಜಿಯ ಮೂಲಕ, ಪೂನಾವಾಲಾ ಜೈಲಿನೊಳಗೆ ಚಳಿಯಾಗುತ್ತಿದ್ದು, ಆರೋಪಿಯಲ್ಲಿ ಸಾಕಷ್ಟು ಬಟ್ಟೆಗಳಿಲ್ಲ ಎಂದು ಅಫ್ತಾಬ್ ಅಮೀನ್ ಪರ ವಕೀಲರು ಹೇಳಿದರು. ಈ ಕಾರಣಕ್ಕಾಗಿ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಿ ದಿನನಿತ್ಯದ ವಸ್ತುಗಳ ಜೊತೆಗೆ ಬೆಚ್ಚಗಿನ ಬಟ್ಟೆಗಳನ್ನು ಖರೀದಿಸಲು ಸಹಕರಿಸ ಬೇಕು ಎಂದು ಕೋರಿದ್ದರು.