ಜಮ್ಮು- ಕಾಶ್ಮೀರ : ಹವಾಮಾನ ವೈಪರೀತ್ಯದಿಂದಾಗಿ ಒಂದು ದಿನದ ಮಟ್ಟಿಗೆ ಸ್ಥಗಿತಗೊಂಡಿದ್ದ ಅಮರನಾಥ್ ಯಾತ್ರೆಯನ್ನು ಮತ್ತೆ ಪುನಾರಂಭ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಹವಾಮಾನ ಪರಿಸ್ಥಿತಿ ಸದ್ಯ ಯಾತ್ರೆಗೆ ಅನುಕೂಲವಾಗಿರುವುದರಿಂದ ಅಮರನಾಥ ಯಾತ್ರೆಯನ್ನು ಮತ್ತೆ ಪುನಾರಂಭ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥ ಯಾತ್ರೆಯು ಪಹಲ್ಗಾಮ್ನ ಚಂದನ್ವಾರಿಯಿಂದ ಮತ್ತು ಗಂದೇರ್ ಬಾಲ್ ನ ಬಲ್ಟಾಲ್‌ನಿಂದ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಇದೇ ವೇಳೆ ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದಅಮರನಾಥ ಯಾತ್ರೆ ಪುನಾರಂಭ - ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತ ಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ
ಜಮ್ಮು ಮತ್ತು ಕಾಶ್ಮೀರದ ಹವಾಮಾನ ಪರಿಸ್ಥಿತಿ ಸದ್ಯ ಯಾತ್ರೆಗೆ ಅನುಕೂಲವಾಗಿರುವುದರಿಂದ ಅಮರನಾಥ ಯಾತ್ರೆಯನ್ನು ಮತ್ತೆ ಪುನಾರಂಭ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ
ಹವಾಮಾನ ಪರಿಸ್ಥಿತಿ ಸುಧಾರಿಸಿದ ಕಾರಣದಿಂದ ಜಮ್ಮುವಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಯಾತ್ರೆಯನ್ನು ಮತ್ತೆ ಪುನಾರಂಭಿಸಲಾಗಿದೆ ಎಂದು ಜಮ್ಮು ವಿಭಾಗೀಯ ಆಯುಕ್ತರು ಟ್ವೀಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿದ್ದ ಹವಾಮಾನ ವೈಪರೀತ್ಯದಿಂದಾಗಿ ಅಮರನಾಥ ಯಾತ್ರೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿತ್ತು.
ಓದಿ :58ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪಾಸ್ ಆದ MLA.. ಯಾರಿವರು ಜನಪ್ರತಿನಿಧಿ!