ಕರ್ನಾಟಕ

karnataka

ETV Bharat / bharat

'ಶ್ರೀ ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರ': ಕನ್ನಡದಲ್ಲೇ ಟ್ವೀಟ್ ಮಾಡಿ ಮೋದಿ ನಮನ - ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ

ತ್ರಿವಿಧ ದಾಸೋಹಿ, ಕಾಯಕಯೋಗಿ, ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರ 115 ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

Siddaganga shivakumar swamiji jayanti
Siddaganga shivakumar swamiji jayanti

By

Published : Apr 1, 2022, 10:41 AM IST

ನವದೆಹಲಿ:ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಗೌರವ ನಮನ ಸಲ್ಲಿಕೆ ಮಾಡಿದ್ದಾರೆ. 'ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ' ಎಂದು ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳ 11ನೇ ಜಯಂತಿ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ 4 ಲಕ್ಷ ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು, ಅವರಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಟೋಪಚಾರದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ಮೊದಲ ಎಸೆತದಲ್ಲೇ ಸಿಕ್ಸರ್! ಎಬಿಡಿ ದಾಖಲೆ ಸರಿಗಟ್ಟಿದ ಧೋನಿ; IPLನಲ್ಲಿ 7 ಸಾವಿರ ರನ್​ ಸರದಾರ

ಬೆಳಗ್ಗೆ 10 ಗಂಟೆಯ ನಂತರ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ನಾಯಕ/ ಸಂಸದ ರಾಹುಲ್ ಗಾಂಧಿ ಮಠಕ್ಕೆ ಭೇಟಿ ಶ್ರೀಗಳ ಗದ್ದುಗೆಯ ದರ್ಶನ ಪಡೆದುಕೊಂಡಿದ್ದಾರೆ.

ABOUT THE AUTHOR

...view details