ಕರ್ನಾಟಕ

karnataka

ETV Bharat / bharat

ದೆಹಲಿಯಲ್ಲಿ ಸೋನಿಯಾ ಭೇಟಿಯಾದ ಸಿದ್ದರಾಮಯ್ಯ; ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ

ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

Siddaramaiah met Sonia Gandhi in New Delhi today
ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿ ಭೇಟಿ: ಕುತೂಹಲ ಮೂಡಿಸಿದ ಸೋನಿಯಾ ಜೊತೆ ಚರ್ಚೆ

By

Published : Oct 5, 2021, 1:23 PM IST

Updated : Oct 5, 2021, 1:34 PM IST

ನವದೆಹಲಿ:ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಒಂದೂವರೆ ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದರು.

ಆ ಬಳಿಕ ಹೊರಬಂದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾರಿನಲ್ಲಿ ತೆರಳಿದರು. ಇದಕ್ಕೂ ಮುನ್ನ ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ

ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಏರಿಳಿತಗಳು ಕಾಣಿಸಿಕೊಳ್ಳುತ್ತಿವೆ. ಪಂಜಾಬ್, ಛತ್ತೀಸ್​ಗಢ, ಕೇರಳ ಕಾಂಗ್ರೆಸ್​​ನಲ್ಲಿ ಸ್ವಲ್ಪಮಟ್ಟದ ಅಸಮಾಧಾನಗಳು ಕಾಣಿಸಿಕೊಂಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇದಷ್ಟೇ ಅಲ್ಲದೇ ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಸೋನಿಯಾ ಗಾಂಧಿಯವರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿರಬಹುದು ಎನ್ನಲಾಗಿದೆ.

ಇದನ್ನೂ ಓದಿ:ರೈತರ ಮೇಲೆ ಕಾರು ಹರಿಸಿದ ಪ್ರಕರಣ: ವಿಡಿಯೋ ಹಂಚಿಕೊಂಡ ಪ್ರಿಯಾಂಕಾ ಗಾಂಧಿ

Last Updated : Oct 5, 2021, 1:34 PM IST

ABOUT THE AUTHOR

...view details