ಕರ್ನಾಟಕ

karnataka

ETV Bharat / bharat

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕಾರ ?

ಮೇ 18 ರಂದು ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿಯ ಹಿರಿಯ ಪದಾಧಿಕಾರಿಯೊಬ್ಬರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತ ಪ್ರಕಟಣೆ ಮಾತ್ರ ಹೊರ ಬಿದ್ದಿಲ್ಲ.

Siddaramaiah to be sworn in as next Chief Minister of Karnataka tomorrow
Siddaramaiah to be sworn in as next Chief Minister of Karnataka tomorrow

By

Published : May 17, 2023, 3:09 PM IST

Updated : May 17, 2023, 8:18 PM IST

ನವದೆಹಲಿ:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಗುರುವಾರ (ಮೇ 18) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಬುಧವಾರ ತಿಳಿಸಿವೆ. “ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ ಎಂದು ಎಐಸಿಸಿಯ ಹಿರಿಯ ಪದಾಧಿಕಾರಿಯೊಬ್ಬರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ನೂತನ ಮುಖ್ಯಮಂತ್ರಿ ಜತೆಗೆ ಉಪಮುಖ್ಯಮಂತ್ರಿ ಕೂಡ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ, ಒಗ್ಗಟ್ಟಿನ ತೀರ್ಮಾನ ತೆಗೆದುಕೊಂಡರೆ ಮಾಧ್ಯಮಗಳಿಗೆ ತಿಳಿಸಲಾಗುತ್ತದೆ ಎಂದು ಕರ್ನಾಟಕ ಚುನಾವಣಾ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.

ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಡಿಕೆ ಶಿವಕುಮಾರ್ ನೂತನ ಉಪಮುಖ್ಯಮಂತ್ರಿಯಾಗಬಹುದು, ಜಾತಿ ಸಮೀಕರಣಗಳನ್ನು ಸರಿದೂಗಿಸಲು ಮತ್ತೊಬ್ಬ ವ್ಯಕ್ತಿಯನ್ನು (ದಲಿತ) ಉಪ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂದು ಸಹ ಮೂಲಗಳು ತಿಳಿಸಿವೆ. ಇದಾದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಸಮಾಲೋಚನೆಗಾಗಿ ದೆಹಲಿಯಲ್ಲಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಮರಳಲಿದ್ದಾರೆ.

ಅತ್ತ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿರುವ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಹಕ್ಕೊತ್ತಾಯ ಮುಂದುವರೆಸಿದ್ದರಿಂದ ಸಿಎಂ ವಿಚಾರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗಳಕ್ಕೆ ಬಂದಿದೆ. ಇದೇ ವಿಚಾರವಾಗಿ ಉಭಯ ನಾಯಕರಿಬ್ಬರು ಕಾಂಗ್ರೆಸ್​ ನಾಯಕರಾದ ಮಲ್ಲಿಕಾರ್ಜುನ್​ ಖರ್ಗೆ ಮತ್ತು ರಾಹುಲ್​ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಸಹ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಸಭೆ ಮೇಲೆ ಸಭೆ ಮಾಡುತ್ತಲೇ ಬರಲಾಗುತ್ತಿದೆ. ಇಂದು ಮುಖ್ಯಮಂತ್ರಿ ಗೊಂದಲ ಬಹುತೇಕ ಕೊನೆಗೊಳ್ಳಲಿದ್ದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಶೀಘ್ರದಲ್ಲೇ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಬಹುತೇಕ ಶಾಸಕರ ಬೆಂಬಲವನ್ನು ಸಿದ್ದರಾಮಯ್ಯ ಹೊಂದಿದ್ದು, ಮುಂದಿನ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಲು ಮತ್ತು ಪಕ್ಷ ನೀಡಿದ ಭರವಸೆಗಳನ್ನು ಜಾರಿಗೆ ತರಲು ಸಿದ್ದರಾಮಯ್ಯ ಅವರ ಕೈಬಲಪಡಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಡಿಕೆ ಶಿವಕುಮಾರ್ ಅವರು ಪಕ್ಷ ಸಂಘಟನೆ ಮಾಡುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು​ ಅಧಿಕಾರಕ್ಕೆ ತರುವುದಲ್ಲಿ ಮುಖ್ಯ ಪಾತ್ರ ಕೂಡ ದೊಡ್ಡದು. ಆದರೆ, ಕೆಲವು ಕಾರಣಾಂತರಗಳಿಂದ​ ಮುಖ್ಯಮಂತ್ರಿ ಹುದ್ದೆ ಕೈ ತಪ್ಪಿರಬಹುದೆಂದು ಪಕ್ಷದ ಹಿರಿಯರೊಬ್ಬರು ಮಾಹಿತಿ ನೀಡಿದ್ದಾರೆ.

224 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಮೇ 10ರಂದು ಚುನಾಚಣೆ ನಡೆದಿತ್ತು. ಮೇ 13 ರಂದು ಫಲಿತಾಂಶ ಹೊರಬಿದ್ದಿತ್ತು. 224 ವಿಧಾನಸಭಾ ಸ್ಥಾನಗಳ ಪೈಕಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿತು.

ಇದನ್ನು ಓದಿ:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತ: ಹುಟ್ಟೂರಿನಲ್ಲಿ ಸಂಭ್ರಮ

Last Updated : May 17, 2023, 8:18 PM IST

ABOUT THE AUTHOR

...view details