ಚಂಡೀಗಢ(ಪಂಜಾಬ್):ಪಂಜಾಬ್ ಗಾಯಕ ಸಿಧು ಮುಸೇವಾಲಾ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಧು ಮುಸೇವಾಲಾ ಅಭಿಮಾನಿಗಳು ಹಾಗೂ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಭಗವಂತ್ ಮಾನ್ ಸಿಧು ಕುಟುಂಬದವರನ್ನು ಭೇಟಿ ಮಾಡಿದರು ಮತ್ತು ಹಂತಕರ ಪತ್ತೆಗೆ 15 ದಿನಗಳ ಕಾಲಾವಕಾಶವನ್ನು ಕೇಳಿದ್ದಾರೆ.
ಅಮಿತ್ ಶಾ ಭೇಟಿ ಸಾಧ್ಯತೆ: ಸಿಧು ಮುಸೇವಾಲಾ ಅವರ ತಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಸಿದ್ದು ಮೂಸೆವಾಲ ಪೋಷಕರಿಗೆ ಆಹ್ವಾನ ನೀಡಲಾಗಿದೆ. ಆದರೆ, ಈ ಬಗ್ಗೆ ಸಿದ್ದು ಮೂಸೆವಾಲಾ ಕುಟುಂಬಸ್ಥರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗುರುವಾರ, ಸಿದ್ದು ಮೂಸೆವಾಲಾ ಅವರ ತಂದೆ ಅಮಿತ್ ಶಾ ಅವರಿಗೆ ಪತ್ರ ಬರೆದು ತಮ್ಮ ಮಗನ ಹತ್ಯೆಯ ಬಗ್ಗೆ ಕೇಂದ್ರ ಏಜೆನ್ಸಿಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.