ಕರ್ನಾಟಕ

karnataka

ETV Bharat / bharat

ಲತಾ ಮಂಗೇಶ್ಕರ್‌ಗೆ ಮುಂದಿನ 10-12 ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ - ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​

ಕೊರೊನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮುಂದಿನ 10-12 ದಿನಗಳ ಕಾಲ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.

Singer Lata Mangeshkar Covid
Singer Lata Mangeshkar Covid

By

Published : Jan 12, 2022, 2:56 PM IST

ಮುಂಬೈ(ಮಹಾರಾಷ್ಟ್ರ):ಕೋವಿಡ್​ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ದೇಶದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯದ ಬಗ್ಗೆ ಇದೀಗ ಆಸ್ಪತ್ರೆಯ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಲತಾ ಮಂಗೇಶ್ಕರ್​ ಅವರು ಐಸಿಯು ವಾರ್ಡ್​​ನಲ್ಲಿದ್ದು, ಮುಂದಿನ 10-12 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಕೋವಿಡ್​ ಜೊತೆಗೆ ಅವರು ನ್ಯುಮೋನಿಯಾದಿಂದಲೂ ಬಳಲುತ್ತಿದ್ದಾರೆ ಎಂದು ಬ್ರೀಚ್​ ಕ್ಯಾಂಡಿ ಆಸ್ಪತ್ರೆ ವೈದ್ಯ ಡಾ.ಪ್ರತೀತ್​ ಸಮಧಾನಿ ತಿಳಿಸಿದರು.

'ಆರೋಗ್ಯ ಸ್ಥಿರವಾಗಿದೆ'

ಈಗಾಗಲೇ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇತರೆ ಆರೋಗ್ಯ ಸಂಬಂಧಿತ ಸಮಸ್ಯೆ ಹಾಗೂ ವಯೋಸಹಜ ತೊಂದರೆಯಿರುವ ಕಾರಣ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬ ಸದಸ್ಯರುತಿಳಿಸಿದ್ದಾರೆ.

92 ವರ್ಷದ ಪ್ರಖ್ಯಾತ ಗಾಯಕಿ 70ರ ದಶಕದಲ್ಲಿ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ರೀತಿಯ ವಿಶಿಷ್ಟ ಛಾಪು ಮೂಡಿಸಿದ್ದರು. ಇವರಿಗೆ ದೇಶದ ಪ್ರತಿಷ್ಠಿತ ಪ್ರಶಸ್ತಿಗಳಾದ ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ, ದಾದಾಸಾಹೇಬ್​ ಫಾಲ್ಕೆ ಸೇರಿದಂತೆ ಅನೇಕ ಗೌರವಗಳು ಸಂದಿವೆ. ಇಲ್ಲಿಯವರೆಗೆ ಇವರು 30 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ABOUT THE AUTHOR

...view details