ಮೋಹನ್ಪುರ (ತ್ರಿಪುರಾ): ತ್ರಿಪುರಾದಲ್ಲಿ ಟಿಎಂಸಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವ ಈ ಹೊತ್ತಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ರಾಜ್ಯ ಪ್ರವಾಸದ ಮೊದಲ ದಿನವಾದ ಇಂದು, ಆದಿವಾಸಿ ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗೆ 1,300 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.
ಮೋಹನ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, 10 ದಿನಗಳೊಳಗೆ ಬುಡಕಟ್ಟು ಪ್ರದೇಶಗಳ ಅಭಿವೃದ್ಧಿ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ರಾಜ್ಯದಲ್ಲಿ ಪ್ರಬಲ ಬುಡಕಟ್ಟು ಪ್ರದೇಶಗಳಿಗೆ ಪ್ರತ್ಯೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ರಾಜ್ಯದ ಅರ್ಧದಷ್ಟು ಜನಸಂಖ್ಯೆ ಎಸ್ಸಿ, ಎಸ್ಟಿ ಸಮುದಾಯಗಳಿದ್ದು, ಈ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಕೇಂದ್ರ ಸರ್ಕಾರ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ವಿಶ್ವ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರವು ಒಟ್ಟಾಗಿ ಹಣ ನೀಡುತ್ತಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.