ಶಿವಕಾಶಿ(ತಮಿಳುನಾಡು):ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿ, 19 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿರುವ ಸಂತ್ರಸ್ತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಹಾಗೂ ಗಾಯಗೊಂಡಿರುವ ವ್ಯಕ್ತಿಗಳ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಬಲಿ, 14 ಮಂದಿಗೆ ಗಾಯ
ಶಿವಕಾಶಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಜೆ ಭಾರೀ ಸ್ಫೋಟ ಸಂಭವಿಸಿರುವ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಆರು ಮಂದಿ ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಾಲೀಕ ಥಾಂಕಾರಜ್ ಅವರನ್ನ ಬಂಧನ ಮಾಡಲಾಗಿದೆ. ಸುಮಾರು 200 ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹತ್ತಿರದ 13 ಕಟ್ಟಡಗಳು ಹಾನಿಗೊಳಗಾಗಿವೆ.