ನವದೆಹಲಿ: ದೇಶದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಮೋಟಾರು ವಾಹನ ನಿಯಮದಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗ್ತಿದ್ದು, ಇದೀಗ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
8 ಪ್ರಯಾಣಿಕರನ್ನು ಸಾಗಿಸುವ ವಾಹನದಲ್ಲಿ ಕನಿಷ್ಠ 6 ಏರ್ಬ್ಯಾಗ್ ಕಡ್ಡಾಯಗೊಳಿಸುವ ಕರಡು ಜಿಎಸ್ಆರ್ ಅಧಿಸೂಚನೆಗೆ ಗಡ್ಕರಿ ಅನುಮೋದನೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಚಿವರು ಟ್ವೀಟ್ ಮಾಡಿದ್ದಾರೆ.
ಕಾರಿನಲ್ಲಿ ಕನಿಷ್ಠ ಎರಡು ಏರ್ಬ್ಯಾಗ್ ಇರಬೇಕೆಂದು ತಿಳಿಸಿದ್ದ ಕೇಂದ್ರ ಸರ್ಕಾರ, ಇದೇ ನಿಯಮಕ್ಕೆ ತಿದ್ದುಪಡಿ ಮಾಡಿ ಕನಿಷ್ಠ ಆರು ಏರ್ಬ್ಯಾಗ್ ಕಡ್ಡಾಯಗೊಳಿಸಿದೆ.