ಕರ್ನಾಟಕ

karnataka

ETV Bharat / bharat

ಬಿಹಾರದಲ್ಲಿ ರೈಲು ದುರಂತ: ಹಳಿ ತಪ್ಪಿದ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು: ನಾಲ್ವರ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ - ರೈಲು ಅಪಘಾತ

ದೆಹಲಿ - ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ ಘಟನೆ ಬಿಹಾರದ ಬಕ್ಸರ್​ ಜಿಲ್ಲೆಯಲ್ಲಿ ನಡೆದಿದೆ.

ಬಿಹಾರದದಲ್ಲಿ ರೈಲು ದುರಂತ: ಹಳಿ ತಪ್ಪಿದ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು
ಬಿಹಾರದದಲ್ಲಿ ರೈಲು ದುರಂತ: ಹಳಿ ತಪ್ಪಿದ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು

By ETV Bharat Karnataka Team

Published : Oct 12, 2023, 1:57 AM IST

Updated : Oct 12, 2023, 7:36 AM IST

ಪಾಟ್ನಾ (ಬಿಹಾರ):ಬಿಹಾರದ ಬಕ್ಸರ್​ ಜಿಲ್ಲೆಯಲ್ಲಿ ರೈಲು ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೆಹಲಿ - ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬಕ್ಸರ್ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. 23 ಬೋಗಿಗಳನ್ನು ಹೊಂದಿರುವ ರೈಲು ಬೆಳಗ್ಗೆ 7:40ಕ್ಕೆ ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನಿಂದ ಹೊರಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 9:53 ಕ್ಕೆ ರೈಲು ಹಳಿ ತಪ್ಪಿದ್ದು, ಮತ್ತು ಕನಿಷ್ಠ ಎರಡು ಎಸಿ III ಶ್ರೇಣಿಯ ಕೋಚ್‌ಗಳು ಹಳಿ ತಪ್ಪಿ ಪಕ್ಕಕ್ಕೆ ಉರುಳಿಬಿದ್ದಿವೆ, ಆದರೆ ಇತರ ನಾಲ್ಕು ಬೋಗಿಗಳು ಟ್ರ್ಯಾಕ್‌ಗಳನ್ನು ಬಿಟ್ಟು ಬೇರೆ ಕಡೆ ಜಿಗಿದಿವೆ ಎಂಬುದನ್ನು ಸೆರೆಯಾದ ಕೆಲವು ದೃಶ್ಯಗಳು ತೋರಿಸುತ್ತಿವೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಬಕ್ಸರ್ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ. ಕನಿಷ್ಠ 50 ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಪಡೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ತಕ್ಷಣವೇ ಪರಿಹಾರ ಕಾರ್ಯ ಆರಂಭಿಸಲಾಗಿದೆ. ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಇದುವರೆಗೆ ನಾಲ್ಕೈದು ಜನರು ಸಾವನ್ನಪ್ಪಿರುವ ಮಾಹಿತಿ ಸಿಕ್ಕಿದೆ ಎಂದು ಬಕ್ಸರ್​ ಜಿಲ್ಲಾಧಿಕಾರಿ ಅಂಶುಲ್ ಅಗರ್ವಾಲ್ ತಿಳಿಸಿದ್ದಾರೆ. ಸದ್ಯ, ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಪರಿಹಾರ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದಾರೆ.

ಹಲವು ರೈಲುಗಳ ಸಂಚಾರ ರದ್ದು: ಅಪಘಾತದ ಹಿನ್ನೆಲೆಯಲ್ಲಿ ಕಾಶಿ ಪಾಟ್ನಾ ಜನ ಶತಾಬ್ದಿ ಎಕ್ಸ್‌ಪ್ರೆಸ್ (15125) ಮತ್ತು ಪಾಟ್ನಾ ಕಾಶಿ ಜನ ಶತಾಬ್ದಿ ಎಕ್ಸ್‌ಪ್ರೆಸ್ (15126) ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ಈಸ್ಟ್ ಸೆಂಟ್ರಲ್ ರೈಲ್ವೆ ವಲಯ ಹೊರಡಿಸಿದ ಪ್ರಕಟಣೆ ತಿಳಿಸಿದೆ.

ಪರ್ಯಾಯ ಮಾರ್ಗ:ಪುಣೆ-ದಾನಪುರ್ ಎಸ್‌ಎಫ್ ಎಕ್ಸ್‌ಪ್ರೆಸ್ (12149), ಪಾಟ್ಲಿಪುತ್ರ ಎಸ್‌ಎಫ್ ಎಕ್ಸ್‌ಪ್ರೆಸ್ (12141), ದಿಬ್ರುಗಢ ರಾಜಧಾನಿ ಎಕ್ಸ್‌ಪ್ರೆಸ್ (12424), ವಿಕ್ರಮಶಿಲಾ ಎಕ್ಸ್‌ಪ್ರೆಸ್ (12368), ಕಾಮಾಖ್ಯ ಎಕ್ಸ್‌ಪ್ರೆಸ್ (15623), ಗುವಾಹಟಿ 3) , ರಾಜೇಂದ್ರ ನಗರ ಟರ್ಮಿನಲ್ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್ (12310), ಭಾಗಲ್ಪುರ್ ಗರೀಬ್ ರಥ ಎಕ್ಸ್‌ಪ್ರೆಸ್ (22406), Anvt Rdp ಎಕ್ಸ್‌ಪ್ರೆಸ್ (22488) ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ಎಲ್ಲ ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ಈಸ್ಟ್​ ಸೆಂಟ್ರಲ್​​ ರೈಲ್ವೆ ತಿಳಿಸಿದೆ.

ಇದನ್ನು ಓದಿ:ಉತ್ತರ ಪ್ರದೇಶದಲ್ಲಿ ರೈಲು ಅವಘಡ: ತಪ್ಪಿದ ಅನಾಹುತ

Last Updated : Oct 12, 2023, 7:36 AM IST

ABOUT THE AUTHOR

...view details