ಕರ್ನಾಟಕ

karnataka

ETV Bharat / bharat

ಶಿವನ ದರ್ಶನ ಪಡೆದು ವಾಪಸ್​ ಬರ್ತಿದ್ದಾಗ ಅಪಘಾತ: 6 ಭಕ್ತರ ದುರ್ಮರಣ - ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ

ಶಿವನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡಿರುವ ವಾಹನ ಮರಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಆರು cಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

road accident in Odisha
road accident in Odisha

By

Published : Mar 1, 2022, 8:30 PM IST

ನುಪಾಡಾ(ಒಡಿಶಾ):ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್​ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್​ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಅಮೆರಿಕ ಸೇನೆಗೆ ಸೇರ್ಪಡೆಯಾಗಿ ಅಪರೂಪದ ಇತಿಹಾಸ ಬರೆದ ಕಾಲಿವುಡ್​ ನಟಿ!

ಲಭ್ಯವಾಗಿರುವ ಮಾಹಿತಿ ಪ್ರಕಾರ, ಛತ್ತೀಸ್​ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ.

ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ABOUT THE AUTHOR

...view details